ವಿಶ್ವಮಾನವಗೀತೆ - ಅನಿಕೇತನ THE UNHOUSED CONSCIOUSNESS Poem by KUVEMPU KV PUTTAPPA

ವಿಶ್ವಮಾನವಗೀತೆ - ಅನಿಕೇತನ THE UNHOUSED CONSCIOUSNESS

Rating: 5.0


THE UNHOUSED CONSCIOUSNESS

Be unhoused, O my soul!
Only the Infinite be your goal.

Leave these myriad forms behind,
Leave the million names that bind,
A flash piercing your heart and mind,
Be unhoused, O my soul!
Only the Infinite be your goal.

Winnow the chaff of a hundred creeds
Beyond these systems.hollow as reeds,
Turn unhorizened to the Truth that leads;
Be unhoused, O my soul 1
Only the Infinite be your goal.

Stop not on the unending way.
Never build a house of clay.
Endless the quest both night and day:
No end, no end to you play!
Be unhoused, O my soul!
Only the Infinite be your goal.

The Infinite cancels its end, -
Diurnal seer, to descent.
Endless the quest your apprehend
And so, Infinite, you ascend,
Be unhoused, O my soul!
Only the Infinite be your goal.


ವಿಶ್ವಮಾನವಗೀತೆ - ಅನಿಕೇತನ

ಓ ನನ್ನ ಚೇತನ,
ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗನ೦ತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆ೦ದೂ ಕಟ್ಟದಿರು;
ಕೊನೆಯನೆ೦ದೂ ಮುಟ್ಟದಿರು;
ಓ ಅನ೦ತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!

ಅನ೦ತ ತಾನ್ ಅನ೦ತವಾಗಿ
ಆಗುತಿಹನೆ ನಿತ್ಯಯೋಗಿ;
ಅನ೦ತ ನೀ ಅನ೦ತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!

POET'S NOTES ABOUT THE POEM
Message Of Universal Man

Every child, at birth, is the universal man. But, as it grows, we turn it into 'a petty man'. It shouldbe the function of the education to turn it again into the original 'universal man'.

The child which by birth was the universal man us fettered by us with such constraints as country, language, religion, caste race and colour. To free it from all these limitations and transform it into 'the enlightened soul', that is to say the universal man, - this should become the first and foremost function of our education, culture, civilization and what not. All children of the world should become 'unhoused' beings, if the world should survive, should continue to live, and advance.

In the course of human evolution great men arose at different periods to fulfill the needs of their times and (then they) passed into history. The message of some of them assumed the form of a distinct religion, but eventually narrowed down into a mere creed. The voice of the great souls, which had sprung from the noble motive of bringing together all men and making them live nobly, degenerated into a mere creed, and thus became a pernicious opiate. There are instances of a religion turning into a mere creed in the course of time and becoming quite worthless in the process, thus giving rise to another - one more new religion. In this manner, numerous creeds arose, broke up humanity into groups and schisms, and have even ignited was, almost as if they were the root cause of all the troubles and turmoils of the world! To the experimental outlook of our scientific age the superstition of religion is no longer acceptable. As Vinoba Bhave said some years agao, 'The days of religion and politics have passed. The age of science and spirituality has now to dawn'.

The Religion of Humanity, the Universal Path, the Welfare of All Reconciliation, the Integral Vision - these five mantras should become view of the future. In other words, what we want henceforth is not this religion or that religion, but then Religion of Humanity; not this path or that path but then Universal Path; not the wellbeing of this individual or that individual, but the Welfare of All; not turning away and breaking off from one another, but reconciling and uniting in concord and harmony; and above all, not the partial view of narrow creed, not the dual outlook of the material and the spiritual, but the Integral Vision of seeing all the things with the eye of the Divine.

Ideas which are applicable to all mankind do not relate to a single cast or creed, a single section or country. Since they are of value for all time, these are basic human values which tend towards uniting all men and enabling them tolive in harmony. They give no room to groupism, which, after all, is the sordid game of politics. While giving full scope for individual freedom, this view aims at collective uplift. On this view it is possible to have as many religious as there are individuals; and it is possible for all the individuals to contribute towards the development of the whole community. It is this 'vision' which is proclaimed by the following poem. 'The Unhoused Consciousness.'

The Charter of Fundamental Principles, to be practiced in order to become universal man.

The Seven Articles (of the Charter)

We have to accept unconditionally that 'All mankind is verily, one (community) .'
Our attempt should be not to reform the caste system but to wipe it out completely. That is to say, distinctions like Brahmanas, Kshatriyas, Vaisyas and Sudras, or the Depressed classes, or Shia and Sunni, or Catholicas and Ptotestant, or Sikh and Nirankari, should be eradicated altogether.
The case systems that exist in all countries and all religions should be totally denounced and completely destroyed.
‘Religion' should go, and ‘spirituality' alone, being a scientific principle, must be recognized.
‘Religion' should become ‘the Religion of Humanity'; the Path should become the ‘Universal Path'; and man should become the ‘Universal Man'.
Religion should not become a matter for creating schisms. No one should belong to any particular religion; on the contrary, everyone should belong to 'his own' religion - the religion that he has personally discovered. This will mean that there will be as many religions as there are individuals in the world; no one will seek to embrace another's religion, from his own group and create factions.
No single book should become the 'only one' and the 'most scared' scripture. Everyone should, on the contrary study and assimilate all the books he can and should freely decide what to accept, and build for himself his own ‘philosophy'.

ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ'ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ ‘ವಿಶ್ವಮಾನವ'ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನು ‘ಬುದ್ಧ'ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲ ‘ಅನಿಕೇತನ'ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.'

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ

ಈ ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ ‘ದರ್ಶನ'ವನ್ನೆ ‘ವಿಶ್ವಮಾನವ ಗೀತೆ' ಸಾರುತ್ತದೆ.

ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:

ಸಪ್ತಸೂತ್ರ

'ಮನುಷ್ಯಜಾತಿ ತಾನೊ೦ದೆ ವಲ೦' ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
‘ಮತ' ತೊಲಗಿ ‘ಅಧ್ಯಾತ್ಮ' ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ'ವಾಗಬೇಕು; ಪಥ ‘ವಿಶ್ವಪಥ'ವಾಗಬೇಕು; ಮನುಷ್ಯ ‘ವಿಶ್ವಮಾನವ'ನಾಗಬೇಕು.
ಮತ ಗು೦ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ೦ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ೦ಡುಕೊಳ್ಳುವ ‘ತನ್ನ' ಮತಕ್ಕೆ ಮಾತ್ರ ಸೇರಬೇಕು. ಅ೦ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ೦ಖ್ಯೆಯ ಮತಗಳಿರುವ೦ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು೦ಪುಕಟ್ಟಿ ಜಗಳ ಹಚ್ಚುವ೦ತಾಗಬಾರದು.
ಯಾವ ಒ೦ದು ಗ್ರ೦ಥವೂ ‘ಏಕೈಕ ಪರಮ ಪೂಜ್ಯ' ಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ'ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು.
COMMENTS OF THE POEM
Sneha 08 November 2021

Super translation

0 0 Reply
READ THIS POEM IN OTHER LANGUAGES
Close
Error Success