Shishunala Sharif

(7 March 1819 – 1889 / Shishuvinahala, Shiggaon taluk, Haveri district, Karnataka / India)

ಸ್ನೇಹ ಮಾಡಬೇಕಿಂತವಳ! - Poem by Shishunala Sharif

ಸ್ನೇಹ ಮಾಡಬೇಕಿಂಥವಳ! - ಒಳ್ಳೇ
ಮೋಹದಿಂದಲಿ ಬಂದು - ಕೂಡುವಂಥವಳ

ಚಂದ್ರಗಾವಿ ಶೀರೀನುಟ್ಟು - ದಿವ್ಯ
ಕೆಂದಾವರಿ ಮಗ್ಗಿ ಕುಪ್ಪಸ ತೊಟ್ಟು
ಬಂದಳು ಮಂದಿರ ಬಿಟ್ಟು - ನಾಲ್ಕು
ಮಂದಿಯೊಳು ಬಂದು ನಾಚುವಳೆಷ್ಟು!

ಅರಗಿಳಿ ಸಮ ಇವಳ ನುಡಿಯು - ಚೆಲ್ವ
ಸುಳಿನಾಭಿ ಕುಚಕುಂಭಗಳ ಹಂಸನಡೆಯು
ಥಳಥಳಿಸುವ ತೋಳ್ತೊಡೆಯು - ಒಳ್ಳೇ
ಬಳುಬಳುಕುವ ನಡುವು ತಳಿರಡಿಯು.

ಮುಕ್ತ ಕಾಮಿನಿ ಎನ್ನ ಕಾಡಿ - ಮೋಹ
ಮತ್ತ ಸುರತಸುಖ ಸುಡುವಂತೆ ಕೂಡಿ
ಹುಟ್ಟನ್ನೇ ಕಳೆದಳೊ ಖೋಡಿ - ದೇವ
ಶಿಶುನಾಳಾಧೀಶನ ಪಾದಕೆ ದೂಡಿ!


Comments about ಸ್ನೇಹ ಮಾಡಬೇಕಿಂತವಳ! by Shishunala Sharif

There is no comment submitted by members..



Read this poem in other languages

This poem has not been translated into any other language yet.

I would like to translate this poem »

word flags

What do you think this poem is about?



Poem Submitted: Thursday, July 12, 2012

Poem Edited: Thursday, July 12, 2012


[Report Error]